i
ಶೇಂಗಾ ಬೆಳೆಗೆ ಪ್ಯಾಕೇಜ್ ಘೋಷಿಸಿ, ಪರಶುರಾಂಪುರ ತಾಲೂಕು ಘೋಷಿಸಿ-ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಚಳ್ಳಕೆರೆ ತಾಲ್ಲೂಕಿನಲ್ಲಿ ಈ ಬಾರಿ ಸಂಪೂರ್ಣ ಬರ ಆವರಿಸಿದೆ. ಒಟ್ಟು 85,680 ಹೆಕ್ಟೇರ್ ಕೃಷಿ ಭೂಮಿಯಲ್ಲಿ 72,650 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬೆಳೆಯುತ್ತಾರೆ. ಈ ಬಾರಿ ಬೆಳೆ ಸಂಪೂರ್ಣ ಹಾಳಗಿದ್ದು, ಸರ್ಕಾರ ಶೇಂಗಾ ಬೆಳೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರ್ಕಾರಕ್ಕೆ ಎಂದು ಶಾಸಕ ಟಿ.ರಘುಮೂರ್ತಿ ಮನವಿ ಮಾಡಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆಯ ಚರ್ಚೆಯ ವೇಳೆ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪರುಶುರಾಂಪುರವನ್ನು ತಾಲ್ಲೂಕು ಕೇಂದ್ರವಾಗಿ ಮಾಡಬೇಕು. ಚಳ್ಳಕೆರೆ ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ ಅನುದಾನ ನೀಡಬೇಕು. ತಾಲ್ಲೂಕಿನ ಪ್ರತಿ ಹೋಬಳಿಯಲ್ಲೂ ಗೋಶಾಲೆ ತರೆಯಲು ಅನುಮತಿಸಿ ಸಹಾಯ ಒದಗಿಸಬೆಕು. ಅರೆ ಅಲೆಮಾರಿ ಹಾಗೂ ಅಲೆಮಾರಿ ಜನಾಂಗವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳನ್ನು ಮಂಜೂರು ಮಾಡುವಂತೆ ಶಾಸಕ ಟಿ.ರಘುಮೂರ್ತಿ ಕೋರಿದರು. ಬರಗಾಲದ ಪರಿಹಾರ ಮೊತ್ತವನ್ನು ಸ್ವಯಂಚಾಲಿತವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕಂದಾಯ ಸಚಿವ ಕೃಷ್ಣಭೈರೇಗೌಡ ಚಳ್ಳಕೆರೆ ತಾಲ್ಲೂಕು ಆಯ್ಕೆ ಮಾಡಿಕೊಂಡಿದ್ದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.
ರೂ. 50 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ: 2019-20ರ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಚಳ್ಳಕೆರೆ, ಮೊಳಕಾಲ್ಮೂರು, ಶಿರಾ, ಪಾವಗಡ ಹಾಗೂ ಮಧುಗಿರಿ ತಾಲ್ಲೂಕುಗಳ ಅಭಿವೃದ್ಧಿ ರೂ.50 ಕೋಟಿ ವಿಶೇಷ ಅನುದಾನ ನೀಡಿತ್ತು. ಆದರೆ ಮುಂದೆ ಬಂದ ಸರ್ಕಾರಗಳು ಅನುದಾನವನ್ನು ತಡೆ ಹಿಡಿದಿವೆ. ಕೂಡಲೇ ಈ ಅನುದಾನವನ್ನು ಒದಗಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಆಗ್ರಹಿಸಿದರು.