i
ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿ ಪ್ರಕಟ- ಕೆಪಿಎಸ್ಸಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಸಂಖ್ಯೆ ಪಿಎಸ್ಸಿ-1 ಆರ್ಟಿಬಿ- 4&6/2022 ದಿನಾಂಕ:03/09/2022 ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಸ್ಥಿಕ ನಿರ್ದೇಶನಾಲಯದಲ್ಲಿ ಸಹಾಯಕ ನಿರ್ದೇಶಕರು 10+6 (ಹೈ.ಕ), ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ನೇಮಕಾತಿ ಸಂಬಂಧ ಮೂಲದಾಖಲೆಗಳ ಪರಿಶೀಲನೆಗೆ 1:3ರ ಅನುಪಾತದಲ್ಲಿ ಅರ್ಹರಿರುವ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಡಿಸೆಂಬರ್ 7 ರಂದು ಪ್ರಕಟಿಸಿದೆ.
ಅರ್ಹತಾ ಪಟ್ಟಿಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಡಿಸೆಂಬರ್ 27 ರಂದು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಲು ನಿಗದಿಪಡಿಸಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಜಾಲತಾಣ https://kpsc.kar.nic.in/Lists ನಲ್ಲಿ ನೋಡುವಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್.ಲತಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.