i
ಸರ್ಕಾರಿ ನೌಕರ ಗುರುಲಿಂಗಪ್ಪ ಆತ್ಮಹತ್ಯೆಗೆ ಶರಣು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ನೌಕರನೊಬ್ಬ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಭೂಮಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ಈಗ ಚುನಾವಣೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಲಿಂಗಪ್ಪ(52) ಮನೆಯ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಭಾನುವಾರ ಮಧ್ಯಾಹ್ನ ಚಳ್ಳಕೆರೆಯ ವಾಲ್ಮೀಕಿ ನಗರದ ಮನೆಯಲ್ಲಿ ಡೆತ್ ನೋಟ್ ಬರೆದು ನೇಣಿಗೆ ವೈರಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಪಿಎಸ್ ಐ ಶಿವರಾಜ್ ಹಾಗೂ ಕಸಬಾ ಕಂದಾಯ ನಿರೀಕ್ಷಕ ಲಿಂಗೇಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸ್ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಬೇಕಿದೆ.