i
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೆಸರು ಬಳಕೆಗೆ ಅಭ್ಯಂತರವಿಲ್ಲ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್ಟಿಸಿ ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ. ಈ ಸಂಬಂಧ ಮದ್ರಾಸ್ ಹೈಕೋರ್ಟ್ನಲ್ಲಿ ಕೇರಳ ಆರ್ಟಿಸಿ ಸಂಸ್ಥೆಯು ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ಟಿಸಿ‘ ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು, ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013 ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರಗಳನ್ನು ಸಂಸ್ಥೆಯು 1973ನೇ ನವೆಂಬರ್ 1 ರಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್, ರವರಿಂದ ಕೆಎಸ್ಆರ್ಟಿಸಿ ‘ಲೋಗೋ’ ಮತ್ತು ‘ಗಂಡಭೇರುಂಡ’ ಗುರುತು ಬಳಕೆಗಾಗಿ ಕಾಪಿ ರೈಟ್ನ್ನು ಸಹ ಪಡೆಯಲಾಗಿರುತ್ತದೆ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ (Intellectual Property Appellate Board) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಸ್ಥೆಯು 42 ವರ್ಷಗಳಿಂದ ಕೆಎಸ್ಆರ್ಟಿಸಿ ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿರುತ್ತದೆ ಆದ್ದರಿಂದ ಕೆಎಸ್ಆರ್ಟಿಸಿಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೆಎಸ್ಆರ್ಟಿಸಿ ವಾದಿಸಿದೆ.
ಕೇರಳ ಕೆಆರ್ಟಿಸಿ ಕೂಡ 2019ರಲ್ಲಿ ಕೆಎಸ್ಆರ್ಟಿಸಿಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿಯನ್ನು ಪಡೆದುಕೊಂಡಿದೆ. ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು, ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟಿಗೆ ವರ್ಗಾಯಿಸಲಾಯಿತು. ಈ ಪ್ರಕರಣವು 2023 ನೇ ಡಿಸೆಂಬರ್ 12 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ ಆರ್ಟಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೇರಳ ಕೆಆರ್ಟಿಸಿ ಸಲ್ಲಿಸಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ ‘ಕೆಎಸ್ಆರ್ ಟಿ ಸಿ’ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ ಮಂಡಳಿಯ ಕಾರ್ಯದರ್ಶಿ / ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.