i
ಡಿ.20ರಂದು ಮಕ್ಕಳ ರಕ್ಷಣಾ ನೀತಿ ಕುರಿತು ಶೈಕ್ಷಣಿಕ ತರಬೇತಿ ಕಾರ್ಯಾಗಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಇದೇ ಡಿಸೆಂಬರ್ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಕುರಿತು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಘನ ಉಪಸ್ಥಿತಿ ವಹಿಸುವರು. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಧಮೇಂದ್ರರ್ ಕುಮಾರ್ ಮೀನಾ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ, ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಡಿ.ಕೆ. ಶೀಲಾ, ಜಿ.ಟಿ.ಬಸವರಾಜ್, ಬಾಲನ್ಯಾಯಾ ಮಂಡಳಿ ಸದಸ್ಯರಾದ ಮಧುಕರ್, ಸುಮನ ಎಸ್ ಅಂಗಡಿ ಭಾಗವಹಿಸುವರು. ಕೊಪ್ಪಳ ಜಿಲ್ಲೆಯ ಯೂನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಕೆ. ರಾಘವೇಂದ್ರ ಭಟ್ಟ ಉಪನ್ಯಾಸ ನೀಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.