i
ಕರ್ನಾಟಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ರಮೇಶ್ ಬಾಬು ಅವಿರೋಧ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯ ಕಚೇರಿಯಲ್ಲಿ ಸರ್ವ ಸದಸ್ಯರ ಸಭೆ ನಡೆದು ಕರ್ನಾಟಕ ವಿದ್ಯಾ ಸಂಸ್ಥೆಯ 60 ನೇ ವಾರ್ಷಿಕ ಮಹಾ ಸಭೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಹಾಜರಿದ್ದು ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಅವಿರೋಧ ಆಯ್ಕೆ-
ಕರ್ನಾಟಕ ವಿದ್ಯಾ ಸಂಸ್ಥೆಯ ಅಧ್ಯಕ್ಷರಾಗಿ ಮಂಜುನಾಥ್.ವಿ. ಆರ್. ಉಪಾಧ್ಯಕ್ಷರಾಗಿ ರಮೇಶ್ ಬಾಬು, ಕಾರ್ಯದರ್ಶಿಯಾಗಿ ಎಂ. ಆರ್. ನಾರಾಯಣಪ್ಪ, ಉಪ ಕಾರ್ಯದರ್ಶಿಯಾಗಿ ಡಿ.ಜಿ. ಪ್ರಭಾಕರ್, ಖಜಾಂಚಿಯಾಗಿ ಎಂ.ಹೆಚ್.ಆಂಜನೆಯ, ನಿರ್ದೇಶಕರುಗಳಾಗಿ ಪದ್ಮನಾಭ ಎಂ.ಎಂ, ನಾಗರಾಜ್. ಹೆಚ್. ಎನ್., ಹೆಚ್. ಗುರುದೇವ್, ವಿಕ್ರಮ್, ಪಿ.ಎಸ್.ನಂಜುಂಡಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.