i
ಕಾಡುಗೊಲ್ಲರಿಗೆ ಎಸ್ಟಿ ಮೀಸಲಾತಿ, ಗೌಡರ ಪತ್ರಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಲು ಪರಿಶೀಲಿಸಿ ಕ್ರಮ ವಹಿಸೋದಾಗಿ ಕೇಂದ್ರ ಸಚಿವ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ನವದೆಹಲಿಗೆ ತೆರಳಿದ್ದಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಹಲವು ವಿಷಯಗಳ ಚರ್ಚೆ ನಡೆಸಿದ್ದರು.
ಜೊತೆಗೆ ಕಾಡುಗೊಲ್ಲ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದರು. ಪ್ರಧಾನಿ ಮೋದಿಯವರಿಗೆ ಮಾಡಲಾಗಿದ್ದ ಮನವಿ ಪತ್ರವನ್ನು ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಕೇಂದ್ರ ಸಚಿವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ನಿಮ್ಮ ಮನವಿ ಪತ್ರವನ್ನು ಸ್ವೀಕರಿಸಿದ್ದೇವೆ. ಕಾಡುಗೊಲ್ಲ ಸಮುದಾಯದವರಿಗೆ ಎಸ್.ಟಿ ಮೀಸಲಾತಿ ಸೌಲಭ್ಯ ಕಲ್ಪಿಸಲು ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮವಹಿಸುವುದಾಗಿ ಭರವಸೆ ನೀಡಿದ್ದಾರೆ.