i
ಜಿಲ್ಲಾಸ್ಪತ್ರೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ದಿಢೀರ್ ಭೇಟಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೀರಾವರದ ಶಾಲಾ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಇಂದು ರಾತ್ರಿ 9.20 ಗಂಟೆಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಬೀರಾವರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥರಾದ ಘಟನೆ ಬುಧವಾರ ಮಧ್ಯಾಹ್ನ ಜರುಗಿದೆ.ಚಿತ್ರದುರ್ಗ ತಾಲೂಕಿನ ಬೀರಾವರ ಗ್ರಾಮದ ಸರ್ಕಾರಿ ಶಾಲೆಯ 39 ಮಕ್ಕಳು ಬಿಸಿಯೂಟ ಸೇವಿಸಿದ ಒಂದು ಗಂಟೆಗಳ ನಂತರ ಅಸ್ವಸ್ಥರಾಗುತ್ತಿದ್ದಂತೆ ಅಂಬ್ಯುಲೆನ್ಸ್ ಮೂಲಕ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡಿಸಲಾಗಿದೆ. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ್ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿಪಡೆದುಕೊಂಡರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್, ಡಿಡಿಪಿಐ ರವಿಶಂಕರ್ ರೆಡ್ಡಿ ಇದ್ದರು.