i
ಡಿ.30ರಂದು ಕುರಿ ಮತ್ತು ಮೇಕೆ ಸಾಕಣಿಕೆ ಕುರಿತು ತರಬೇತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ “ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿ. 30 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಂಡಿದ್ದು ಆಸಕ್ತ ರೈತರು ಭಾಗವಹಿಸಬಹುದಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಎನ್. ಕುಮಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ. ಸಿ.ತಿಪ್ಪೇಸ್ವಾಮಿ, ನಿವೃತ್ತ ಸಹಾಯಕ ನಿರ್ದೇಶಕ ಡಾ. ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಾಗರಾಜ್ ಅವರು, ಕುರಿ ಮತ್ತು ಮೇಕೆಯಲ್ಲಿ ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆ ಬಗ್ಗೆ ವಿಶೇಷ ಉಪನ್ಯಾಸ ನೀಡುವರು.
ತರಬೇತಿಯಲ್ಲಿ ಭಾಗವಹಿಸಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಉಷಾರಾಣಿ ಎಂ (9980730696) ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959) ಮತ್ತು ಪವಿತ್ರಾ ಎಂ. ಜೆ. (9535412286) ರವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು. ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.