i
ಡಿ.29ರಂದು ವಿಶ್ವಮಾನವ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ಇವರ ವತಿಯಿಂದ ಇದೇ ಡಿ.29 ರಂದು ಬೆಳಿಗ್ಗೆ 11ಕ್ಕೆ ನಗರದ ತ.ರಾ.ಸು ರಂಗಮAದಿರದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವವರು. ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವವರು. ಗೌರವಾನ್ವಿತ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್ ಭಾಗವಹಿಸುವರು.
ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಹುರುಳಿ ಎಂ. ಬಸವರಾಜ್ ಉಪನ್ಯಾಸ ನೀಡುವರು. ಚಿತ್ರದುರ್ಗ ಮೀನಾಕ್ಷಿ ಭಟ್ ಮತ್ತು ತಂಡದಿAದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.