i
ಕಾರ್ಮಿಕ ನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾಗಿರುವ ಉಳಿಕೆ ಮೂಲ ವ್ಯವದ ಕಾರ್ಮಿಕ ಇಲಾಖೆಯಲೆಯಲ್ಲಿನ ಕಾರ್ಮಿಕ ನಿರೀಕ್ಷಕರ 20 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡಿಸೆಂಬರ್ 27 ರಂದು ಆಯೋಗದ ಜಾಲತಾಣದಲ್ಲಿ http://kpsc.kar.nic.in ನಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು–01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು. 07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್.ಲತಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.