i
ಚಿತ್ರದುರ್ಗ ಲೋಕಸಭಾ ಚುನಾವಣೆ ತಯಾರಿಗಾಗಿ ಖರ್ಗೆ ಮನೆಯಲ್ಲಿ ಸಭೆ ನಡೆಸಿದ ಮುಖಂಡರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಬೇಕು ಎನ್ನುವ ಉತ್ಸಾಹದಲ್ಲಿರುವ ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಟಿಕೆಟ್ ಆಕಾಂಕ್ಷಿಗಳ ಜೊತೆಯಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಗಂಭೀರ ಚರ್ಚೆ ಮಾಡಲಾಯಿತು.
ಪಕ್ಷ ಸಂಘಟನೆ ಸೇರಿದಂತೆ ಮುಂಬರುವ ಚಿತ್ರದುರ್ಗ ಲೋಕಸಭಾ ಚುನಾವಣೆ ಕುರಿತು ಚರ್ಚಿಸಿ ಸಲಹೆ ಮತ್ತು ಸೂಚನೆ ಖರ್ಗೆ ಅವರು ಮುಖಂಡರುಗಳಿಂದ ಪಡೆದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್.ಆಂಜನೇಯ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ಅಧ್ಯಕ್ಷ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಎಸ್.ಮಂಜುನಾಥ್, ಕೆಪಿಸಿಸಿ ಸದಸ್ಯ ಮೊಹಮ್ಮದ್ ಪಾಷಾ ಇದ್ದರು.