i
ಬಿಎ, ಬಿಎಸ್ಸಿಯಲ್ಲಿ ಡಿವಿಎಸ್ಗೆ 5 ರ್ಯಾಂಕ್…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕುವೆಂಪು ವಿಶ್ವವಿದ್ಯಾಲಯವು ೨೦೨೩ ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಬಿ.ಎ. ಪದವಿ ಪರೀಕ್ಷೆಯಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಬಿ,ಎ.ಕಲಾ ವಿಬಾಗದ ವಿದ್ಯಾರ್ಥಿಗಳಾದ ವರುಣಕುಮಾರ ಬಿ.ಬಿ. ನಾಲ್ಕನೇ ರ್ಯಾಂಕ್ ಹಾಗೂ ರವೀಶ ಆರ್. ಏಳನೇ ರ್ಯಾಂಕ್ ಗಳಿಸಿದ್ದಾರೆ.ಬಿ.ಎಸ್ಸಿ. ಪರೀಕ್ಷೆಯಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳಾದ ನವಮಿ ಬಿ.ಪಿ. ಆರನೇ ರ್ಯಾಂಕ್ ಹಾಗೂ ಸಂಚಿತಾ ಜೋಯಿಸ್ ಎಚ್. ೧೦ನೇ ರ್ಯಾಂಕ್ ಗಳಿಸಿದ್ದಾರೆ. ಬಿ.ಸಿ.ಎ. ಪರೀಕ್ಷೆಯಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿ ನೂತನ್ ಕೆ.ಪಿ. ಅವರು ೧೦ನೇ ರ್ಯಾಂಕ್ ಗಳಿಸಿದ್ದಾರೆ.ಕುವೆಂಪು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯ ವಿವಿಧ ವಿಭಾಗಗಳಲ್ಲಿ ರ್ಯಾಂಕ್ ಗಳಿಸಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ದೇಶಿಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ, ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.