i
ಹಿಟ್ ಅಂಡ್ ರನ್ ಅಪಘಾತಕ್ಕೆ ಓರ್ವ ವ್ಯಕ್ತಿ ಬಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಬಸವ ಭವನದ ಬಳಿಯ ಡೈರಿ ಮುಂಭಾಗ ತುಮಕೂರು ರಸ್ತೆಯಲ್ಲಿ ಹಿಟ್ ಅಂಡ್ ರನ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.
ಮೃತರನ್ನು ನಗರದ ರಾಜೀವ್ ಗಾಂಧಿ ಬಡಾವಣೆಯ 2ನೇ ಹಂತ, ಗಂಗಧಾರಪುರ ಬಡಾವಣೆ ನಿವಾಸಿ ಶಿವಶಂಕರಪ್ಪ( 54) ಎನ್ನಲಾಗಿದೆ.
ಶಿವಶಂಕರಪ್ಪ ಅವರು ಯಲಹಂಕದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ರೇಷನ್ ಕಾರ್ಡ್ ಗೆ ಹೆಬ್ಬೆಟ್ಟು ನೀಡಲು ಯಲಹಂಕದಿಂದ ದೊಡ್ಡಬಳ್ಳಾಪುರದ ಮನೆಗೆ ಬರುತ್ತಿದ್ದರು. ಅಂಬೇಡ್ಕರ್ ವೃತ್ತದಲ್ಲಿ ಬಸ್ ಇಳಿದು ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಢಿಕ್ಕಿ, ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತ ಎಸಗಿದ ವಾಹನ ಇನ್ನೂ ಪತ್ತೆ ಯಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಗುದ್ದೋಡಿದ ಪ್ರಕರಣ ದಾಖಲಾಗಿದೆ.