i
ಪದವಿ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ…
ಚಂದ್ರವಳ್ಳಿ ನ್ಯೂಸ್, ತೀರ್ಥಹಳ್ಳಿ:
ತೀರ್ಥಹಳ್ಳಿಯ ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ತಾಲೂಕಿನ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಅಧೀಕ್ಷಾ(೨೦) ಗುರುವಾರ ರಾತ್ರಿ ತಂದೆ ತಾಯಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.