i
ಹಳೆ ಪಿಂಚಣಿ ಜಾರಿ ಮಾಡಿ ‘ಗೆಜೆಟ್’ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ ರಾಜ್ಯಪತ್ರ ಹೊರಡಿಸಿದೆ.
ಉಲ್ಲೇಖ ಮಾಡಿರುವುದು ಈ ಕೆಳಕಂಡಂತಿವೆ-ಸರ್ಕಾರಿ ಆದೇಶದನ್ವಯ ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ 22-12-2003ರ ಮೊದಲು ನೇಮಕಾತಿ/ ನೇಮಕಾತಿಗಾಗಿ ಜಾಹೀರಾತು/ಅಧಿಸೂಚಿಸಲಾದ ಹುದ್ದೆ ಅಥವಾ ರಿಕ್ತ ಸ್ಥಾನದ ಎದುರಾಗಿ ನೇಮಕಾತಿ ಹೊಂದಿ ದಿನಾಂಕ:01.01.2004ರಂದು ಅಥವಾ ತದನಂತರ ಸೇವೆಗೆ ಸೇರಿದ ನೌಕರರಿಗೆ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಒಂದು ಬಾರಿಯ ಆಯ್ಕೆಯ ಅವಕಾಶವನ್ನು ಕಲ್ಪಿಸಿ ದಿನಾಂಕ:31.08.2023 ರೊಳಗೆ ಆಯ್ಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರದ ದಿನಾಂಕ:03.03.2023ರ ಅಧಿಕೃತ ಜ್ಞಾಪನದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ.