i
ಫೆ.9ರಂದು ಸೂಕ್ಷ್ಮ ಮತ್ತು ತುಂತುರ ನೀರಾವರಿ ಕುರಿತು ತರಬೇತಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.9ರಂದು ಬೆಳಗ್ಗೆ 10.30ಕ್ಕೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ ಮತ್ತು ಕಸಬಾ, ಹಿರಿಯೂರಿನ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ವಿಜಯ್ಕುಮಾರ್, ಎಜಿಎಂ., ಪ್ರೀಮೀಯರ್ ಇರಿಗೇಷನ್ ಕಂ. ಲಿ., ಬೆಂಗಳೂರು ಇವರು ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ ಘಟಕಗಳ ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು.
ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿ ಮತ್ತು ಕಸಬಾ ಹೋಬಳಿ ಹಿರಿಯೂರಿನ ಆಸಕ್ತ 60 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ (8277931058), ಎಂ.ಉಷಾರಾಣಿ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) 9980730696, ಟಿ.ಪಿ.ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931058) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 60 ಜನ ರೈತ ಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.