![](https://www.chandravallinews.com/wp-content/uploads/2024/02/Sathisjarkiholi.jpg)
i
ಫೆ.9ರಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಇದೇ ಫೆ.9ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಮಧ್ಯಾಹ್ನ 12ಕ್ಕೆ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರ ಸುಕ್ಷೇತ್ರಕ್ಕೆ ಆಗಮಿಸಿ, ಭಗೀರಥ ಪೀಠ ಮಹಾಸಂಸ್ಥಾನ ಮಠದ ವತಿಯಿಂದ ಆಯೋಜಿಸಿರುವ ಜಗದ್ಗುರು ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2ಕ್ಕೆ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಲೋಕೋಪಯೋಗಿ ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ತಿಳಿಸಿದ್ದಾರೆ.