![](https://www.chandravallinews.com/wp-content/uploads/2024/02/sahakara-1024x818.jpeg)
i
ಫೆ.12ರಂದು ಸಹಕಾರಿ ಕ್ಷೇತ್ರದ ಸಿಇಒಗಳಿಗೆ ವಿಶೇಷ ತರಬೇತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಹಕಾರ ಇಲಾಖೆ, ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಇದೇ ಫೆ.12ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಕೆಳಗೋಟೆಯ ಬಿ.ಎಲ್.ಗೌಡ ಲೇಔಟ್ನ ಜಿಲ್ಲಾ ಸಹಕಾರ ಭವನದ ಸಹಕಾರ ಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ ರತ್ನ ಪುರಸ್ಕೃತ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್.ರಾಮರೆಡ್ಡಿ ಉದ್ಘಾಟನೆ ನೆರವೇರಿಸುವರು. ಸಹಕಾರ ರತ್ನ ಪುರಸ್ಕøತ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಪ್ರಭಾರ ಅಧ್ಯಕ್ಷ ಜಿ.ಈ.ಅಜ್ಜಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಪುರಸ್ಕೃತರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಆರ್.ಗಿರೀಶ್, ಸಹಕಾರ ರತ್ನ ಪುರಸ್ಕೃತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿಂಕಲು ಬಸವರಾಜ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಮಾತೃಶ್ರೀ ಎನ್.ಮಂಜುನಾಥ್, ಜೆ.ಶಿವಪ್ರಕಾಶ್, ಹೆಚ್.ಎಂ.ದ್ಯಾಮಣ್ಣ, ಹೆಚ್.ಎನ್.ತಿಪ್ಪೇಸ್ವಾಮಿ, ಬಿ.ಸಿ.ಸಂಜೀವಮೂರ್ತಿ, ಕೆ.ಹೆಚ್.ಜಗನ್ನಾಥ್, ಹೆಚ್.ವಿ.ಪ್ರತಾಪ ಸಿಂಹ, ರತ್ನಮ್ಮ, ಟಿ.ಮಹಂತೇಶ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್, ಸಹಕಾರ ಸಂಘಗಳ ಉಪನಿಬಂಧಕ ಟಿ.ಮಧು ಶ್ರೀನಿವಾಸ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಕೆ.ಮಹೇಶ್ವರಪ್ಪ, ಸಹಾಯಕ ನಿರ್ದೇಶಕ ಪಿ.ಅಂಜಿನಮೂರ್ತಿ ಸೇರಿದಂತೆ ಸಹಕಾರ ಅಭಿವೃದ್ಧಿ ಅಧಿಕಾರಿಗಳು, ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕರು ಭಾಗವಹಿಸುವರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವಿವೇಕಪೂರ್ಣ ಮಾನದಂಡಗಳ ಅಳವಡಿಕೆ ಕುರಿತು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕ ಕೆ.ಮಹೇಶ್ವರಪ್ಪ ಉಪನ್ಯಾಸ ನೀಡುವರು ಎಂದು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾಗರಾಜ ಪಾಟೀಲ್ ತಿಳಿಸಿದ್ದಾರೆ.