![](https://www.chandravallinews.com/wp-content/uploads/2024/02/WhatsApp-Image-2024-02-11-at-7.01.15-PM.jpeg)
i
ಪಾಕಿಸ್ಥಾನದಲ್ಲಿ ಸರಕಾರ ರಚನೆಗೆ ನವಾಜ್ ಯತ್ನ…
ಚಂದ್ರವಳ್ಳಿ ನ್ಯೂಸ್, ಲಾಹೋರ್:
ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್ಷರೀಫ್-ಬಿಲಾವಲ್ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ.
ಪಾಕಿಸ್ತಾನದ ಪಾರ್ಲಿಮೆಂಟ್ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ ಮಾಜಿ ಪ್ರಧಾನಿಗಳಾದ ನವಾಜ್ಷರೀಫ್ (Nawaz Sharif) ಹಾಗೂ ಇಮ್ರಾನ್ಖಾನ್ಇಬ್ಬರೂ ಗೆಲವು ತಮ್ಮದೇ ಎಂದು ಘೋಷಿಸಿಕೊಂಡಿದ್ದಾರೆ. ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆದ್ದಿದೆ.
ಆದರೆ ಇತ್ತ ಪಾಕಿಸ್ತಾನ ಸೇನೆ ಬೆಂಬಲಿತ ಪಿಎಂಎಲ್ಎನ್ ಪಕ್ಷ ಇತರೆ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಹರಸಾಹಸ ಮಾಡುತ್ತಿದೆ. ಇದಕ್ಕೆ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರ ಪುತ್ರ ಬಿಲಾವಲ್ ಭುಟ್ಟೋ ಅವರ ಪಕ್ಷದೊಂದಿಗೆ ಸೇರಿ ಸರ್ಕಾರ ಮಾಡುವ ಕಸರತ್ತು ಮಾಡುತ್ತಿದ್ದಾರೆ. ಆದರೆ ಅವರಿಗೆ ಮತ್ತಷ್ಟು ಸದಸ್ಯರ ಬೆಂಬಲದ ಅಗತ್ಯವಿದ್ದು, ಇದಕ್ಕಾಗಿ ಇಮ್ರಾನ್ ಖಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯುವ ಕಾರ್ಯ ಮಾಡುತ್ತಿದ್ದಾರೆ ಎನ್ನಲಾಗಿದೆ.
ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನ ಪೀಪಲ್ಸ್ಪಾರ್ಟಿಯ (ಪಿಪಿಪಿ) ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಕೈಜೋಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಿಲಾವಲ್ಭುಟ್ಟೋ ಅವರ ಪಿಪಿಪಿ 54 ಸ್ಥಾನಗಳನ್ನು ಗೆದ್ದುಕೊಂಡಿದೆ. ಕ್ರಿಮಿನಲ್ ಅಪರಾಧಗಳ ಕಾರಣದಿಂದ ಗುರುವಾರದ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಂಡು ಜೈಲಿನಲ್ಲಿರುವ ಖಾನ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಶುಕ್ರವಾರ ನಡೆದ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದು ಮತ್ತೆ ಪ್ರಧಾನಿಯಾಗುವ ನವಾಜ್ಷರೀಫ್ ಅವರ ಯೋಜನೆಗಳನ್ನು ತಲೆಕೆಳಗೆ ಮಾಡಿದೆ.