i
ಅನಾರೋಗ್ಯದ ಕಾರಣಕ್ಕೆ ಲೋಕಸಭೆಗೆ ಸ್ಪರ್ಧಿಸಲಾರೆ: ಸೋನಿಯಾ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
‘ಅನಾರೋಗ್ಯದ ಕಾರಣಕ್ಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಘೋಷಿಸಿದ್ದಾರೆ. ಆದರೆ, ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
‘ಆರೋಗ್ಯ ಮತ್ತು ವಯಸ್ಸಿನ ಕಾರಣ, ನಾನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ನಿರ್ಧಾರದ ನಂತರ, ನೇರವಾಗಿ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ಸಿಗುವುದಿಲ್ಲ. ಆದರೆ, ಖಂಡಿತವಾಗಿಯೂ, ನನ್ನ ಹೃದಯ ಮತ್ತು ಆತ್ಮ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ’ ಎಂದರು.
ಸೋನಿಯಾ ಗಾಂಧಿ ಅವರು 1999 ರಲ್ಲಿ ಅಮೇಥಿಯಿಂದ ಸಂಸತ್ ಸದಸ್ಯರಾಗಿ (ಎಂಪಿ) ಆಯ್ಕೆಯಾಗುವ ಮೂಲಕ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು. ನಂತರದ ಬೆಳವಣಿಗೆಯಿಂದಾಗಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾದರು. ನಂತರ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ರಾಯ್ ಬರೇಲಿಯಿಂದ ಗೆದ್ದರು.