i
ಕೆಎಎಸ್, ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಉಚಿತ ತರಬೇತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರ ವಿವಿಧ ಸರ್ಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅದರಲ್ಲೂ ಕೆಎಎಸ್, ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದ್ದು ಈ ಹುದ್ದೆಗಳ ಅರ್ಜಿ ಸಲ್ಲಿಸಿರುವಂತ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ. ಇದರ ಸದುಪಯೋಗ ಮಾಡಿಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಕೆಎಎಸ್- ಗ್ರಾಮ ಲೆಕ್ಕಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿಯನ್ನು ಚಿತ್ರದುರ್ಗ ಸರಸ್ಪತಿ ಪುರಂ, ನಂಬರ್ 13, ಮೊದಲನೇ ಮುಖ್ಯ ರಸ್ತೆ, ಚಿತ್ರದುರ್ಗದ ಮಹಾತ್ಮ ಫುಲೆ ಅಧ್ಯಯನ ಕೇಂದ್ರ ಸಂಸ್ಥೆ ವತಿಯಿಂದ ಮಾರ್ಚ್-10 ರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ತರಗತಿಗಳು ಪ್ರಾರಂಭಗೊಳ್ಳಲಿವೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೊಂದಾಯಿಸಿಕೊಳ್ಳಲು 9242843504, 9483771270, 9740108588 ಸಂಪರ್ಕಿಸಬಹುದಾಗಿದೆ.