i
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೊಳಿಸಿದ ಕೇಂದ್ರ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ, ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.
2019ರಲ್ಲಿ ಸಂಸತ್ತಿನಲ್ಲಿ ಸಿಎಎಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದರೆ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಗೃಹ ಸಚಿವಲಾ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.
2019ರ ಡಿಸೆಂಬರ್ 11ರಂದು ಸಂಸತ್ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ಈ ಕಾಯ್ದೆ ಅನ್ವಯವಾಗುತ್ತದೆ.