i
ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ: ಬಾಬು ಜಗಜೀವನರಾಂ ಅವರ ೧೧೬ನೇ ಹಾಗೂ ಡಾ: ಬಿ.ಆರ್. ಅಂಬೇಡ್ಕರ್ ಅವರ ೧೩೨ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿರುವವರು ತಮ್ಮ ಸ್ವವಿವರಗಳೊಂದಿಗೆ ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಹಾಯಕ ನಿರ್ದೇಶಕರು(ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು ಇವರ ಕಚೇರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.