i
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 08194-222416 ಆಗಿರುತ್ತದೆ.
ಸಹಾಯವಾಣಿ ಕೇಂದ್ರದಲ್ಲಿ ದಿನದ 24 ಗಂಟೆಯೂ (24*7) ಕಾರ್ಯನಿರ್ವಹಿಸುವಂತೆ ಸಿಬ್ಬಂದಿ ನಿಯೋಜಿಸಲಾಗಿರುತ್ತದೆ. ಸಹಾಯವಾಣಿ ಸಂಖ್ಯೆಗೆ ಚುನಾವಣಾ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಚಿತ್ರದುರ್ಗ ತಾಲ್ಲೂಕು ತಹಶೀಲ್ದಾರ್ ಡಾ.ನಾಗವೇಣಿ ತಿಳಿಸಿದ್ದಾರೆ.