i
ಸಾಹಿತ್ಯ ಅಕಾಡೆಮಿ ನಾಮನಿರ್ದೇಶನ ಸದಸ್ಯತ್ವ ನಿರಾಕರಿಸಿದ ಅಕ್ಕಯ್ ಪದ್ಮಶಾಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ತಮ್ಮನ್ನು ಕೈಬಿಡುವಂತೆ ಮನವಿ ಮಾಡಿ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಹಾಗೂ ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಸಲಿದ್ದೇನೆ” ಎಂದು ಅಕ್ಕಯ್ ಪದ್ಮಶಾಲಿ ತಿಳಿಸಿದ್ದಾರೆ.
ತಾವುಗಳು ಇದರ ಬಗ್ಗೆ ಗಮನಹರಿಸಿ ನನ್ನನ್ನು ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಯ ಸದಸ್ಯರನ್ನಾಗಿಸಿ, ಶಾಸನಸಭೆಯ ಭಾಗವಾಗಿ ನಮ್ಮ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆಯನ್ನು ‘ಸರ್ವ ಜನಾಂಗದ ಶಾಂತಿಯ ತೋಟದ’ ನಾಡಿನಲ್ಲಿ ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ ಎಂದು ಕೂಡ ಇದೇ ಪತ್ರದಲ್ಲಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಮಾಡುವ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿತ್ತು.