i
ಏ.24: ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ, ಉಚಿತ ಸಾಮೂಹಿಕ ವಿವಾಹ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ನಗರದ ಶರಾವತಿನಗರದ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ, ಉಚಿತ ಸಾಮೂಹಿಕ ವಿವಾಹವನ್ನು ಎ. ೨೪ರಂದು ಹಮ್ಮಿಕೊಳ್ಳಲಾಗಿದೆ.
ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ.ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡಲಾಗುವುದು.
ಆಸಕ್ತ ವಧು ವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ : ೧೦ /೦೪ /೨೦೨೪ ರೊಳಗೆ ತಮ್ಮ ಹೆಸರನ್ನು ಮೇಲ್ಕಂಡ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರುತ್ತೇವೆ.
ಆದರ್ಶ ದಂಪತಿಗಳಿಗೆ ಸನ್ಮಾನ :
ಪ್ರತಿ ವರ್ಷದಂತೆ ವಿವಾಹವಾಗಿ ೫೦ ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನವೂ ಸಹ ಇರುತ್ತದೆ. ಪ್ರಸನ್ನನಾಥ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ,೦೮೧೮೨-೨೫೭೯೫೮, ೨೫೪೧೪೧, ೯೭೪೨೮೮೫೬೨೭ಸಂಪರ್ಕಿಸಬಹುದು.