i
ನಾನು ಸದಾ ಕಾಡುಗೊಲ್ಲರ ಪರ ಇರುವೆ-ಮುದ್ದಹನುಮೇಗೌಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಡುಗೊಲ್ಲರ ಪರವಾಗಿ ನಾನಿದ್ದೇನೆ, ಹಿಂದೆಯೂ ಸಹ ನಾನು ಸಂಸದನಾಗಿದ್ದಾಗ ಕಾಡುಗೊಲ್ಲರ ಪರವಾಗಿ ಕೆಲಸ ಮಾಡಿದ್ದೇನೆ ಎಂದು ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮುದ್ದ ಹನುಮೇಗೌಡ ತಿಳಿಸಿದರು.
ನಗರದ ಕಾಡು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಸಿ ಶಿವುಯಾದವ್ ಅವರ ಮನೆಗೆ ಭೇಟಿ ಮಾಡಿ ಮಾತನಾಡಿದರು.
2014ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ ಟಿ ಗೆ ಸೇರಿಸುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ, ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು. ಆ ಕಡತ ಕೇಂದ್ರ ಸರ್ಕಾರದಲ್ಲಿ ಹಾಗೆ ಕುಳಿತಿದೆ. ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಕೇಂದ್ರ ಸರ್ಕಾರದಲ್ಲಿ ಒತ್ತಡ ತಂದು ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನಿಮ್ಮ ಜೊತೆಗೆ ನಾನಿರುತ್ತೇನೆ ಎಂದು ತಿಳಿಸಿದರು.
ಕಾಡುಗೊಲ್ಲ ಸಮುದಾಯಕ್ಕೆ ಸಂಬಂಧಪಟ್ಟಂತೆ ಸಂಸತ್ತನಲ್ಲಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಈ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿದ್ದೆ. ಈ ಬಾರಿ ನನಗೆ ನೀವು ಸಹಕಾರ ನೀಡಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಡುಗೊಲ್ಲ ಜನಾಂಗದ ಮುಖಂಡರು ಮತ್ತು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರು ಸೇರಿದಂತೆ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರು ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.