i
ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಮಾರ್ಚ್-25ರಂದು ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.
ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಸುಂ(14) ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಲೆಂದು ಗ್ರಾಮದಿಂದ ಶಿವಮೊಗ್ಗಕ್ಕೆ ತೆರಳಲು ಬಸ್ ಹತ್ತಲೆಂದು ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಡಿಕ್ಕಿ ಹೊಡೆದು ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.