i
ಕಾರ್ಯನಿರತ ಪತ್ರಕರ್ತರ ಧ್ವನಿ ಅಧ್ಯಕ್ಷರಾಗಿ ಜಾಲಿಮಂಜು ನೇಮಕ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಚನ್ನಮ್ಮನಾಗತಿಹಳ್ಳಿಯ ಜಾಲಿಮಂಜು ಇವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷ ಬಂಗ್ಲೆಮಲ್ಲಿಕಾರ್ಜುನ್ ಆದೇಶಿಸಿದ್ಧಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸರ್ಕಾರದೊಡನೆ ಚರ್ಚೆ ನಡೆಸುತ್ತಿದ್ದು, ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯನ್ನು ಹೆಚ್ಚು ಬಲಗೊಳಿಸುವ ಅವಶ್ಯಕತೆ ಇದೆ. ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪತ್ರಕರ್ತರ ಜಾಲಿಮಂಜುರವರನ್ನು ನೇಮಿಸಿದ್ದು, ಮುಂದಿನ ದಿನಗಳಲ್ಲಿ ಅವರು ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನನ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.ತಾಲ್ಲೂಕು ಅಧ್ಯಕ್ಷರಾಗಿ ನಿಯೋಜನೆಗೊಂಡ ಜಾಲಿಮಂಜು ಕಳೆದ ಹಲವಾರು ವರ್ಷಗಳಿಂದ ಪತ್ರಿಕಾಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನನಗೆ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಿಸಿದ್ದು, ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.