i
ಮಾರ್ಚ್-29 ರಂದು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಮಾರ್ಚ್-29 ರಂದು ಮಧ್ಯಾಹ್ನ 3:30 ಕ್ಕೆ ಹಿರಿಯೂರು ನಗರದ ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ಶ್ರೀ ತೇರು ಮಲ್ಲೇಶ್ವರ ಸ್ವಾಮಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜಾ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಬೇಕಾಗಿ ಜೆಡಿಎಸ್ ಹಿರಿಯೂರು ತಾಲೂಕು ಘಟಕದ ಅಧ್ಯಕ್ಷ ಎನ್.ಹನುಮಂತ ರಾಯಪ್ಪ ಮನವಿ ಮಾಡಿದ್ದಾರೆ.