i
ಮೋದಿ ಅವಹೇಳನ ಮಾಡಿದ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳಿ-ಪಾಲಯ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆವೇಳನಕಾರಿ ಹೇಳಿಕೆ ನೀಡಿರುವ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಒತ್ತಾಯಿಸುತ್ತಿದ್ದೇವೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನು ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿರುವ ಸಚಿವ ಶಿವರಾಜ್ ತಂಗಡಗಿ ಇವರು ಆವೇಳನಕಾರಿ ಹೇಳಿಕೆ ನೀಡಿರುವುದು ದೇಶದ ಮುಂದಿನ ಪ್ರಜೆಗಳಾದ ಯುವಕರಿಗೆ ಹೊಡೆಯಿರಿ ಎಂದು ಧಮಕಿ ಹಾಕಿರುವುದರಿಂದ ಯುವಕರು ಮತ ಚಲಾಯಿಸಲು ಮತಗಟ್ಟೆಗಳಿಗೆ ಬರಲು ಎದುರುವ ಸಾಧ್ಯತೆಗಳಿವೆ. ರಾಜ್ಯದ ಹಾಗೂ ಜಿಲ್ಲೆಯ ಯುವಕರಿಗೆ ರಕ್ಷಣೆ ನೀಡಬೇಕು ಮತ್ತು ಪ್ರಧಾನ ಮಂತ್ರಿಗಳ ಬಗ್ಗೆ ಕೇವಲವಾಗಿ ಮಾತನಾಡಿರುವ ಹಾಗೂ ಯುವಕರಿಗೆ ಭಯ ದಿಗಿಲು ಹುಟ್ಟಿಸಿರುವ ಕಾರಣ ಸಚಿವ ಶಿವರಾಜ ತಂಗಡಗಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಚಿತ್ರದುರ್ಗ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಪಾಲಯ್ಯ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ಚಂದ್ರಶೇಖರ್, ಧನು, ಸಂಜಯ್, ಆದರ್ಶ್ ಮುಂತಾದವರು ಇದ್ದರು.