i
ಯಾದವ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠದ ಶ್ರೀ ಬಸವ ಯಾದವಾನಂದ ಮಹಾ ಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಯಾದವ ಮುಖಂಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಅಧ್ಯಕ್ಷ ಮೊಗಲಳ್ಳಿ ಜಯಣ್ಣ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಪರಶುರಾಂಪುರ ಎ.ನಾಗರಾಜ್, ಜಿ.ಎನ್.ಜಗದೀಶ್, ಪ್ರಸನ್ನ ಕುಮಾರ್ ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.