i
ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿಭೇಟಿ, ಪರಿಶೀಲನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನೆಡೆಸಿದರು.ಈ ವೇಳೆ ಸ್ಥಳೀಯರನ್ನು ಭೇಟಿ ಮಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ತಪ್ಪದೇ ಎಲ್ಲರೂ ಮತದಾನ ಮಾಡಬೇಕು. ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದು ಭಯ ಹಾಗೂ ಆತಂಕಕ್ಕೆ ಒಳಗಾಗದೆ ಮತದಾನ ಮಾಡುವಂತೆ ಸ್ಥಳೀಯರನ್ನು ಪ್ರೇರೇಪಿಸಿದರು.
ಬುರುಜನಹಟ್ಟಿಯಹಿರಿಯ ಪ್ರಾಥಮಿಕ ಪಾಠಶಾಲೆ, ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢ ಶಾಲೆ, ನೆಹರುನಗರದ ಮಿಲ್ಲತ್ ಸಂಯುಕ್ತ ಪಿ.ಯು. ಕಾಲೇಜ್, ಉಮರ್ ಮಸೀದಿ ಹತ್ತಿರ ರಾಮದಾಸ ಕಾಂಪೌಂಡ್ ಇಲ್ ಮುಲ್ ಹುದಾ ಇಸ್ಲಾಮಿಯಾ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಜೆ.ಜೆ,ಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಸಿ.ಕೆ.ಪುರ ಬಡಾವಣೆಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ,ಐ.ಯು.ಡಿ.ಪಿ, ಲೇ ಔಟ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ನಗರ ಸಭೆ ಆಯುಕ್ತೆ ಎಂ.ರೇಣುಕಾ ಉಪಸ್ಥಿತರಿದ್ದರು.