i
ಚುನಾವಣಾ ದೂರುಗಳಿಗೆ ಟೋಲ್ ಫ್ರೀ ಸಂಖ್ಯೆ 1950…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾರ್ವಜನಿಕರು ಚುನಾವಣೆ ಪ್ರಕ್ರಿಯೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಮತ್ತು ದೂರುಗಳಿದ್ದಲ್ಲಿ ಮತದಾರರ ಟೋಲ್ ಫ್ರೀ ಸಂಖ್ಯೆ 1950 ಗೆ ಸಂಪರ್ಕಿಸಬಹುದು. ಕರೆ ಆಧರಿಸಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು. ದೂರದಾರರ ವಿವರಗಳನ್ನು ಸಹ ಗೌಪ್ಯವಾಗಿ ಇರಿಸಲಾಗುವುದು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ದೂರುಗಳನ್ನು ಸಿ-ವಿಜಿಲ್ ಮೊಬೈಲ್ ಆಪ್ ಮೂಲಕವೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.