i
ಎಂಬ್ರಾಯ್ಡರಿ & ಫ್ಯಾಬ್ರಿಕ್ ಪೇಟಿಂಗ್ ಕುರಿತ ಉಚಿತ ತರಬೇತಿ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ (ಆರಿ ವರ್ಕ್) & ಫ್ಯಾಬ್ರಿಕ್ ಪೇಟಿಂಗ್ ಕುರಿತ ೩೦ ದಿನಗಳ ಉಚಿತ ತರಬೇತಿಯು ಮೇ ೧೫ ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ೧೮ ರಿಂದ ೪೫ ವ? ವಯೋಮಾನದವರಾಗಿದ್ದು, ಕನ್ನಡ ಭಾ? ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್, ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ ೮ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: ೯೩೮೦೧೬೨೦೪೨, ೯೭೪೦೯೮೨೫೮೫, ೯೧೧೩೮೮೦೩೨೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.