i
ಕುರಿ/ಮೇಕೆ ಸಾಕಾಣಿಕೆ ಮಾಡಲು ರೈತರಿಗೆ ತರಬೇತಿ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಕುರಿ/ಮೇಕೆ ಸಾಕಾಣಿಕೆ ಕುರಿತು ಆಸಕ್ತ ೨೫ ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ಕುರಿ/ಮೇಕೆ ಸಾಕಾಣಿಕೆ ತರಬೇತಿಯನ್ನು ಏಪ್ರಿಲ್ ೨ ಮತ್ತು ೩ರಂದು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ಬೆಳಿಗ್ಗೆ ೧೦ ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ.
ತರಬೇತಿಗೆ ಹಾಜರಾಗಲು ಇಚ್ಛಿಸುವವರು ೨ ಪಾಸ್ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ/ದೂರವಾಣಿ ಸಂಖ್ಯೆ ೦೮೧೬-೨೨೫೧೨೧೪ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.