![](https://www.chandravallinews.com/wp-content/uploads/2024/04/Govind-M-Karjol-1571050023.jpg)
i
ಏಪ್ರಿಲ್-4ರಂದು ಗೋವಿಂದ ಕಾರಜೋಳ ನಾಮಪತ್ರ, ಹಲವು ಗಣ್ಯರು ಭಾಗಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಏಪ್ರಿಲ್-4 ರಂದು ಗುರುವಾರ ಬೆಳಿಗ್ಗೆ 11:30 ಗಂಟೆಗೆ ನೀಲಕಂಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗಾಂಧಿ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲು ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್, ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ, ಶಾಸಕ ಗಾಲಿ ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಎಸ್ ಕೆ ಬಸವರಾಜನ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಜೆಡಿಎಸ್ ಮುಖಂಡರಾದ ಕಾಂತರಾಜ್, ಯಶೋಧರ್, ರವೀಶ್, ರವೀಂದ್ರ, ತಿಪ್ಪೇಸ್ವಾಮಿ ಮುಂತಾದ ಬಿಜೆಪಿ ಹಾಗು ಜೆಡಿಎಸ್ ಜಿಲ್ಲಾ ಹಾಗು ರಾಜ್ಯ ನಾಯಕರು, ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.