i
ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗುರುವಾರ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಇಲ್ಲಿನ ನೀಲಕಂಠೇಶ್ವರ ದೇವಸ್ಥಾನದ ಬಳಿಯಿಂದ ಹೊರಟ ಮೆರವಣಿಗೆ ಗಾಂಧಿ ಸರ್ಕಲ್, ಬಿ.ಡಿ. ರಸ್ತೆ, ಎಸ್ ಬಿಎಂ ಸರ್ಕಲ್, ಪ್ರವಾಸಿ ಮಂದಿರ ರಸ್ತೆ, ತಾಲೂಕು ಕಚೇರಿ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ತೆರಳಿ ನಾಮಪತ್ರ ಸಲ್ಲಿಸಿದರು.
ಎಲ್ಲೆಡೆ ಕೇಸರಿ ಬಿಳಿ ಹಸಿರು ಬಣ್ಣದ ಟೋಪಿಗಳು, ಕಾಂಗ್ರೆಸ್ ಭಾವುಟ ರಾಜಾಜಿಸುತ್ತಿದ್ದವು. ಕಾಂಗ್ರೆಸ್ ಮತ್ತು ಚಂದ್ರಪ್ಪ ಪರ ಘೋಷಣೆಗಳು ಕೇಳಿ ಬಂದವು.
ರಾಯರ ಮಠದಲ್ಲಿ ಪೂಜೆ-
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗುರುವಾರ ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ಕೋಟೆ ರಸ್ತೆಯಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ರಾಯರ ಮಠಕ್ಕೆ ಬೆಳಿಗ್ಗೆ 8 ಗಂಟೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದಾದ ನಂತರ 9 ಗಂಟೆಗೆ ಶ್ರೀನೀಲಕಂಠೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
ಬೆಳಿಗ್ಗೆ 11 ಗಂಟೆ ನಂತರ ಅವರು ಶ್ರೀನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿ ನಂತರ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.