i
ಚುನಾವಣಾ ಸಾಮಾನ್ಯ ಪರಿವೀಕ್ಷಕ ವ್ಯಾಲಿ ಇಟೆ ಭೇಟಿ: ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾಮಾನ್ಯ ಪರಿವೀಕ್ಷಕ ವ್ಯಾಲಿ ಇಟೆ ರವರು ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ವಾಹನ ತಪಾಸಣೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಉಪ ವಿಭಾಗದ ಉಪ ವಿಭಾಗ ಅಧಿಕಾರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮತ್ತು DYSP ಪಿ.ರವಿ ಸೇರಿದಂತೆ ಮತ್ತಿತರರು ಹಾಜರಿದ್ದರು.