i
ಸ್ವೀಪ್ ವತಿಯಿಂದ ಮತದಾನ ಜಾಗೃತಿ ಜಾಥಾ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲೋಕಸಭೆ ಚುನಾವಣೆ…2024ರ ಹಿನ್ನೆಲೆಯಲ್ಲಿ ನಗರಸಭಾ ಸ್ವೀಪ್ ವತಿಯಿಂದ ನಗರಸಭಾ ವ್ಯಾಪ್ತಿಯ ಪ್ರವಾಸಿ ಮಂದಿರ ವೃತ್ತ, ವಿನಾಯಕ ನಗರ, ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಬಗ್ಗೆ… ಮತದಾನ ಜಾಗೃತಿ ಜಾಥಾ ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತದಾನದ ಪ್ರತಿಘ್ನ ವಿಧಿ ಬೋಧಿಸಲಾಯಿತು. ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆ ಅಧಿಕಾರಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.