i
ನಗರಸಭೆ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥಾ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ನಗರಸಭಾ ಸ್ವೀಪ್ ಸಮಿತಿವತಿಯಿಂದ ನಗರಸಭಾ ವ್ಯಾಪ್ತಿಯ ರಂಗಪ್ಪ ವೃತ್ತ ಹಾಗೂ ಆಸ್ಪತ್ರೆ ವೃತ್ತದಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕುರಿತು ಮತದಾನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.