i
ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನ ಭೇಟಿಯಾಗಿ ಬೆಂಬಲ ನೀಡುವಂತೆ ಕೋರಿದ ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಮಾಜಿ ಸಚಿವರು, ಹಿರಿಯ ನಾಯಕರು ಆದ ಹೆಚ್.ವಿಶ್ವನಾಥ್ ಅವರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಶ್ವನಾಥ್ ಅವರು ತೋರಿದ ಪ್ರೀತಿ, ವಿಶ್ವಾಸ ಮತ್ತು ಸಕಾರಾತ್ಮಕ ಸ್ಪಂದನೆಗೆ ಕುಮಾರಸ್ವಾಮಿ ಕೃತಜ್ಞತೆಗಳನ್ನು ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಬಂಡೆಪ್ಪ ಕಾಷೆಂಪೂರ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ವಿಶ್ವನಾಥ್ ಅವರ ಬೆಂಬಲಿಗರು ಉಪಸ್ಥಿತರಿದ್ದರು.