i
ಲೋಕಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾದ್ಯಂತ ಏಪ್ರಿಲ್ ೨೪ರ ಸಂಜೆ ೫ ಗಂಟೆಯಿಂದ ಏಪ್ರಿಲ್ ೨೬ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಹಾಗೂ ಜೂನ್ ೩ರ ಮಧ್ಯರಾತ್ರಿ ೧೨ ಗಂಟೆಯಿಂದ ಜೂನ್ ೪ರ ಮಧ್ಯರಾತ್ರಿ ೧೨ ಗಂಟೆಯವರೆಗೆ ’ಒಣ ದಿನ’ಗಳೆಂದು ಘೋಷಿಸಿ ಈ ಅವಧಿಯಲ್ಲಿ ಎಲ್ಲಾ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ನಿಷೇಧಾವಧಿಯಲ್ಲಿ ಎಲ್ಲಾ ರೀತಿಯ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಸೇರಿದಂತೆ ಮದ್ಯದ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.