i
ನ್ಯಾಯಾಂಗ ಇಲಾಖೆ ನಿವೃತ್ತ ಶಿರಸ್ತೇದಾರ ಮಲ್ಲಿಕಾರ್ಜುನ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಬುರುಜನಹಟ್ಟಿ ವಾಸಿ, ನ್ಯಾಯಾಂಗ ಇಲಾಖೆಯ ನಿವೃತ್ತ ಶಿರಸ್ತೇದಾರ ಎಲ್.ಮಲ್ಲಿಕಾರ್ಜುನ (೬೮) ಅನಾರೋಗ್ಯದಿಂದ ಶುಕ್ರವಾರ ನಿಧನ ಹೊಂದಿದರು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.