i
ಪ್ರಹ್ಲಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರ ಸ್ಪರ್ಧೆ ಘೋಷಣೆ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಬಿಜೆಪಿ ಮತ್ತು ಕೆಂದ್ರ ಸಚಿವ ಪ್ರಹ್ಲಾದ್ ದ ಜೋಷಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಮಹಾಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿರಹಟ್ಟಿ ದಿಂಗಾಲೇಶ್ವರ ಮಹಾಸ್ವಾಮೀಜಿ, ಧರ್ಮದಲ್ಲಿ ರಾಜಕೀಯ ಇರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ. ನೊಂದ ಜನರು ನೋವು ತೋಡಿಕೊಂಡಿದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯದ ಹೊರತುಪಡಿಸಿದರೆ ಕುರುಬ ಸಮುದಾಯ ದೊಡ್ಡದು, ಆದರೆ ಕುರುಬ ಸಮುದಾಯಕ್ಕೆ ಒಂದೇ ಒಂದು ಟಿಕೆಟ್ ಕೊಡಲಿಲ್ಲ. ಲಂಬಾಣಿ ಸಮುದಾಯಕ್ಕೆ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಲು ಪ್ರಲ್ಹಾದ ಜೋಷಿ ಅವರೇ ಕಾರಣ. ಬಿಜೆಪಿ ಹೈಕಮಾಂಡ್, ಕುರುಬ ಸಮುದಾಯ ನಮಗೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಬಹುದೊಡ್ಡ ಸಮುದಾಯವನ್ನು ಬಿಜೆಪಿ ಕಡೆಗಣಿಸಿದೆ. ಶೇಕಡಾ 2ರಷ್ಟು ಇರುವ ಸಮುದಾಯದ ನಾಯಕರಿಗೆ ಎರಡು ಕ್ಯಾಬಿನೆಟ್ ಹುದ್ದೆ ನೀಡಿದ್ದಾರೆ ಎಂದು ಹೇಳಿದ್ದಾರೆ.