i
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತ; 15 ಮಂದಿ ಸಾವು…
ಚಂದ್ರವಳ್ಳಿ ನ್ಯೂಸ್,
ದುರ್ಗ್: Bus carrying workers accident; 15 people died…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ಸೊಂದು ‘ಮುರುಮ್’ ಮಣ್ಣಿನ ಗಣಿಗಾರಿಕೆ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಖಾಸಗಿ ಸಂಸ್ಥೆಯ ಉದ್ಯೋಗಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತರು ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, 30 ಕ್ಕೂ ಹೆಚ್ಚು ಜನರಿದ್ದ ಬಸ್ ರಸ್ತೆಯಿಂದ ಸ್ಕಿಡ್ ಆಗಿ 40 ಅಡಿ ಆಳದ ‘ಮುರುಮ್’ ಗಣಿಯಲ್ಲಿ ಬಿದ್ದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 15 ಜನರು ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.