i
ಇಂದು ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ, ಬೃಹತ್ ಸಮಾವೇಶ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಇದೇ ತಿಂಗಳ ೨೬ ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಟ್ಟಣದ ಕೊಟ್ರೆ ನಂಜಪ್ಪ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಏ. ೧೨ ರ ಇಂದು ಮಧ್ಯಾಹ್ನ ೨ ಗಂಟೆಗೆ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಬೃಹತ್ ಸಮಾವೇಶ ನಡೆಯಲಿದೆ.ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ, ಸಂಚಾಲಕ ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ ಇವರುಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಐತಿಹಾಸಿಕ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದ್ದಾರೆ.