i
ಚೆಕ್ಪೋಸ್ಟ್, ಮತಗಟ್ಟೆಗಳಿಗೆ ಸಾಮಾನ್ಯ ವೀಕ್ಷಕರ ಭೇಟಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಚುನಾವಣೆ ಸಾಮಾನ್ಯ ವೀಕ್ಷಕರಾದ ಮನೋಹರ ಮರಂಡಿ ಅವರು ಬುಧವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಚೆಕ್ಪೋಸ್ಟ್ ಹಾಗೂ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಿತ್ರದುರ್ಗ ನಗರದ ಸೆಂಟ್ ಜೋಸೆಫ್ ಕಾನ್ವೆಂಟ್ ಸ್ಕೂಲ್, ಸರಸ್ವತಿ ಕಾನೂನು ಮಹಾವಿದ್ಯಾಲಯ, ಸಿ.ಕೆ.ಪುರದ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಗ್ರಾಮೀಣ ಭಾಗದ ಸಿದ್ದಾಪುರ, ಮಾನಂಗಿ, ಜಾನಕೊಂಡ ಗ್ರಾಮಗಳ ಮತಗಟ್ಟೆಗಳಿಗೆ ಭೇಟಿ ನೀಡಿದ ಮನೋಹರ ಮರಂಡಿ ಅಗತ್ಯ ಮೂಲಭೂತ ಸೌಕರ್ಯಗಳ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ಗ್ರೇಡ್-2 ತಹಶೀಲ್ದಾರ್ ನಾಗರಾಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.