![](https://www.chandravallinews.com/wp-content/uploads/2024/04/WhatsApp-Image-2024-04-14-at-7.46.19-PM-1024x529.jpeg)
i
ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಬೃಹತ್ ಬಹಿರಂಗ ಸಭೆಯಲ್ಲಿ ಕುಮಾರಸ್ವಾಮಿ ಭಾಗಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಏ.15 ರ ಸೋಮವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಪರವಾಗಿ ಪ್ರಚಾರ ಮಾಡಲು ನಗರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಬರಲಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಹರೀಶ್ ಗೌಡ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರ ಪರವಾಗಿ ಮತ ಯಾಚನೆ ಮಾಡಲು ಸೋಮವಾರ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೊಡ್ಡಬಳ್ಳಾಪುರಕ್ಕೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಅದಿಕವಾಗಿದ್ದು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಮತಗಳನ್ನು ಪರಿಣಾಮಕಾರಿಯಾಗಿ ಬಿಜೆಪಿ ಅಭ್ಯರ್ಥಿಗೆ ವರ್ಗಾಯಿಸುವ ಸಲುವಾಗಿ ಜೆಡಿಎಸ್ ಪಕ್ಷದ ವತಿಯಿಂದ ನಡೆಯುವ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಅವರು ಭಾಗವಹಿಸಲಿದ್ದಾರೆ ಎಂದು ಹರೀಶ್ ಗೌಡ ಹೇಳಿದರು.
ಕುಮಾರಸ್ವಾಮಿ ಅವರು 15/04/2024ರ ಸೋಮವಾರ ಮಧ್ಯಾಹ್ನ
1-30 ,ಕ್ಕೆ ಶ್ರೀ ನೆಲದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹಳೇ ಸರ್ಕಾರಿ ಆಸ್ಫತ್ರೆ ವೃತ್ತದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದು, ಈ ಬಹಿರಂಗ ಸಭೆಗೆ ತಾಲ್ಲೂಕಿನಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹರೀಶ್ ಗೌಡ ಅವರು ಮನವಿ ಮಾಡಿದರು.
ಸಭೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಡಾ.ಕೆ.ಸುಧಾಕರ್, ಶಾಸಕ ಧೀರಜ್, ಸೇರಿದಂತೆ ಜೆಡಿಎಸ್-ಬಿಜೆಪಿ ಪಕ್ಷಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹರೀಶ್ ಗೌಡ ತಿಳಿಸಿದ್ದಾರೆ.